ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಘಟಕ, ವಲಯ, ನಗರ ಕಾಂಗ್ರೆಸ್ ಅಧ್ಯಕ್ಷರ ಸಭೆ
ವಿಟ್ಲ: ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ನಿರ್ದೇಶನದಂತೆ ವಿಟ್ಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮುಂಚೂಣಿ ಘಟಕದ ಅಧ್ಯಕ್ಷರುಗಳು ಹಾಗೂ ವಲಯ.ನಗರ ಅಧ್ಯಕ್ಷರುಗಳು ಸಭೆಯು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್*, ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ* ಪೆರ್ನೆ ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ್ ರೈ ಮಠಂದಬೆಟ್ಟು, ,ದ ಕ ಜಿಲ್ಲಾ ಕಾಂಗ್ರೆಸ್ ಸದಸ್ಯ ರಮಾನಾಥ್ ವಿಟ್ಲ* ಸೇರಿದಂತೆ ಮುಂಚೂಣಿ ಘಟಕದ ಅಧ್ಯಕ್ಷರು,ವಲಯ,ನಗರ ಅಧ್ಯಕ್ಷರು ಉಪಸ್ಥಿತರಿದ್ದರು





