March 15, 2026

ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 25 ಮಂದಿಗೆ ಗಾಯ

0
image_editor_output_image122861077-1750843102289

ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ.

ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!