March 15, 2026

ಕರಾವಳಿಯಲ್ಲಿ ಭಾರೀ ಮಳೆ: .25 ಮತ್ತು 26ರಂದು ಆರೆಂಜ್ ಅಲರ್ಟ್ ಘೋಷಣೆ

0
38b04ccb0dbdb3bb822f0e607d4da8da

ಮಂಗಳೂರು: ಕರಾವಳಿಯಲ್ಲಿ ಮಳೆ ಮತ್ತೆ ಚುರುಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆ ಸುರಿದಿದೆ.

ಬಂಟ್ವಾಳ, ಕಲ್ಲಡ್ಕ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಉಪ್ಪಿನಂಗಡಿ, ಕಡಬ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಸುರತ್ಕಲ್‌, ಮೂಲ್ಕಿ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗಿದೆ. ಗಾಳಿಯಿಂದಾಗಿ ಕೆಲವು ಕಡೆ ಮರಗಳು ಉರುಳಿ ಬಿದ್ದಿವೆ. ಮಂಗಳೂರಿನಲ್ಲಿ ಬೆಳಗ್ಗೆ ಗಾಳಿ-ಮಳೆಯಾಗಿದ್ದು, ಬಳಿಕ ಬಿಟ್ಟು ಬಿಟ್ಟು ಮಳೆ ಸುರಿದಿದೆ.

ಕರಾವಳಿ ಭಾಗದಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಜೂ.25 ಮತ್ತು 26ರಂದು ಭಾರತೀಯ ಹವಾಮಾನ ಇಲಾಖೆ “ಆರೆಂಜ್‌ ಅಲರ್ಟ್‌’ ಘೋಷಿಸಿದೆ. ಈ ವೇಳೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!