ಭಾರೀ ಮಳೆ ಹಿನ್ನೆಲೆ: ಜೂನ್ 26ರಂದು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮ :
1 ನೀರು ಇರುವ ತಗ್ಗು ಪ್ರದೇಶ, ಕೆರೆ ನದಿತೀರ, ತೋಡುಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
- ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ನಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
- ತಾಲೂಕು ಆಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ INCIDENT COMMANDER ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ತಾಲೂಕು ಕಚೇರಿಯ ನಿತಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
- ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ ತೋಡುಗಳ ಹತ್ತಿರ ತೆರಳದಂತೆ ಸೂಚಿಸಲಾಗಿದೆ.
- ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಸಿಕೊಳ್ಳುವುದು.




