ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಪುತ್ರ
ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಪುತ್ರ ಕೊಲೆಗೈದ ಘಟನೆ ವರ್ಕಾಡಿ ಯಲ್ಲಿ ಇಂದು ಮುಂಜಾನೆ ನಡೆದಿದೆ.
ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾ ದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ.
ಘಟನೆಯಲ್ಲಿ ನೆರೆಮನೆಯ ಲೋಲಿಟಾ (30) ಗಂಭೀರ ಸುಟ್ಟ ಗಾಯ ಗಾಯಗೊಂಡಿದ್ದಾರೆ.
ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿದ್ದು, ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾ ರವರನ್ನು ಮನೆಗೆ ಕರೆಸಿ ಬೆಂಕಿ ಹಚ್ಚಿದ್ದಾನೆ. ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಮೃತದೇಹ ವನ್ನು ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.





