ಬಾಲಿವುಡ್ ನಟಿ ಹಾಗೂ ಬಿಗ್ ಬಾಸ್ ಸೀಸನ್ 13ರ ಸ್ಪರ್ಧಿ ಶೆಫಾಲಿ ಹೃದಯಾಘಾತದಿಂದ ಮೃತ್ಯು
ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಸೀಸನ್ 13 ರ ಸ್ಪರ್ಧಿ ಶೆಫಾಲಿ ಜರಿವಾಲಾ (42) ಹೃದಯಾಘಾತದಿಂದ ಶುಕ್ರವಾರ(ಜೂ.27) ನಿಧನ ಹೊಂದಿದ್ದಾರೆ.
ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿಗೆ ಶುಕ್ರವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಪತಿ ಪರಾಗ್ ತ್ಯಾಗಿ ನಟಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಪರಿಶೀಲಿಸಿದ ವೈದ್ಯರು ನಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಧ್ಯಾಹ್ನ 12:30 ರ ಸುಮಾರಿಗೆ ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಶೆಫಾಲಿ ಜರಿವಾಲಾ 2002 ರಲ್ಲಿ ಕಾಂಟಾ ಲಗಾ… ಎಂಬ ವೀಡಿಯೊದ ಮೂಲಕ ಖ್ಯಾತಿ ಗಳಿಸಿದರು, ಇದಾದ ಬಳಿಕ ಅವರು ಸಲ್ಮಾನ್ ಖಾನ್ ಅವರ ಮುಜ್ಸೆ ಶಾದಿ ಕರೋಗಿ ಚಿತ್ರದಲ್ಲಿ ಕಾಣಿಸಿಕೊಂಡರು ಮತ್ತು 2019 ರ ವೆಬ್ ಸರಣಿ ಬೇಬಿ ಕಮ್ ನಾ ನಲ್ಲಿ ನಟಿಸಿದರು. ಅವರು ಬೂಗೀ ವೂಗೀ ಮತ್ತು ನಚ್ ಬಲಿಯೇ ನಂತಹ ಜನಪ್ರಿಯ ನೃತ್ಯ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದರು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..ಎಂಬ ಹಾಡಿಗೆ ನಟಿ ಹೆಜ್ಜೆ ಹಾಕಿದ್ದರು. ಇದೀಗ ನಟಿಯ ಅಕಾಲಿಕ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.





