ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪ್ರಕರಣ: ಮಗುವಿಗೆ ಜನ್ಮ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ
ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಈಗಾಗಲೇ
ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಲೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಸಂತ್ರಸ್ತೆ ವಿದ್ಯಾರ್ಥಿನಿ ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.





