ವಿಟ್ಲ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ಸುಳ್ಳಿಗೆ ಕಾಂಗ್ರೆಸ್ ಉತ್ತರ ಎಂಬ ಜನಜಾಗೃತಿ ಕಾರ್ಯಕ್ರಮ
ವಿಟ್ಲ: ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಟ್ಲ ಬ್ಲಾಕ್ ಕಾಂಗ್ರೇಸ್ ಮುಂದಾಳತ್ವದಲ್ಲಿ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ನೇತೃತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಬಿಜೆಪಿಯ ಸುಳ್ಳಿಗೆ ಕಾಂಗ್ರೆಸ್ ಉತ್ತರ’ ಜನಜಾಗೃತಿ ಸಭೆಯು ವಿಟ್ಲ ಬ್ಲಾಕ್ ವ್ಯಾಪ್ತಿಯ ಅಳಿಕೆ ವಲಯ ಕಾಂಗ್ರೆಸ್ ಆಶ್ರಯದಲ್ಲಿ ಅಳಿಕೆ ಶಾರದಾ ವಿಹಾರ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ದ ಕ ಜಿಲ್ಲಾ ಕಾಂಗ್ರೆಸ್ ಸದಸ್ಯ ರಮಾನಾಥ್ ವಿಟ್ಲ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ವಿಟ್ಲ ಮೆಸ್ಕಾ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು, ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಬ್ಲಾಕ್ ಉಪಾಧ್ಯಕ್ಷರಾದ ಜಯರಾಮ್ ಬಲ್ಲಾಳ್, ದ.ಕ ಎಸ್ ಟಿ ವಿಭಾಗದ ಉಪಾಧ್ಯಕ್ಷ ಕೇಶವ ನಾಯ್ಕ, ಸಾಮಾಜಿಕ ಜಾಲತಾಣ ಅಧ್ಯಕ್ಷ ಅಬ್ಬು ನವಗ್ರಾಮ, ಅಳಿಕೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೀತಾರಾಮ ಶೆಟ್ಟಿ ಮುಳಿಯ, ಪುಣಚ ವಲಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ ರೈ ಸೇರಿದಂತೆ ಪಕ್ಷದ ನಾಯಕರು, ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





