March 13, 2026

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ

0
image_editor_output_image-846300595-1751185167395

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿದೆ.

ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ. ಮಹಜರು ನಡೆಸಿ ನಿಷೇಧಿತ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!