88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್ ಆಯ್ಕೆ
ಬೆಂಗಳೂರು: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.
ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಇದೀಗ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಬಾನು ಮಷ್ತಾಕ್ ಅವರಿಗೆ ಮತ್ತೊಂದು ಗೌರವ ದೊರೆತಂತಾಗಿದೆ.





