December 15, 2025

ಕೂರತ್ ಉರೂಸ್ ಕಾರ್ಯಕ್ರಮದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಘಟನೆ: ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ

0
image_editor_output_image780587952-1751210388218

ಸುಳ್ಯ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ಮಾರ್ ಗ್ರಾಮದ ಐತಿಹಾಸಿಕ ಕೂರತ್ ಮಸೀದಿಯಲ್ಲಿ ಇಂದು ನಡೆದ ವಾರ್ಷಿಕ ಉರೂಸ್ ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಅಸ್ವಸ್ಥಗೊಂಡ ಆರು ಮಂದಿಗೆ ತಕ್ಷಣವೇ ವೈದ್ಯಕೀಯ ನೆರವು ನೀಡಿ ಉಪಚರಿಸಲಾಗಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಕಟನೆಯಲ್ಲಿ ಏನಿದೆ ?
ಇಂದು (29.06.2025) ನಡೆದ ಉರೂಸ್ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಮಸೀದಿ ಆವರಣದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಆರು ಮಂದಿ ದೈಹಿಕವಾಗಿ ನಿತ್ರಾಣಗೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಸ್ಥಳದಲ್ಲಿ ಸನ್ನದ್ಧರಾಗಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ವಯಂಸೇವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಅವರಲ್ಲಿ ಇಬ್ಬರು ಸ್ಥಳದಲ್ಲೇ ಚೇತರಿಸಿಕೊಂಡಿದ್ದು, ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದ ನಾಲ್ವರೂ ಸಂಪೂರ್ಣ ಗುಣಮುಖರಾಗಿ ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

ಪೊಲೀಸ್ ಇಲಾಖೆಯ ಮನವಿ:
ಉರೂಸ್ ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸಾರ್ವಜನಿಕವಾಗಿ ಯಾವುದೇ ಸುಳ್ಳು ವದಂತಿಗಳನ್ನು ಹರಡಬಾರದು. ಸಾರ್ವಜನಿಕರು ಇಂತಹ ಆಧಾರರಹಿತ ಸುದ್ದಿಗಳಿಗೆ ಕಿವಿಗೊಡದೆ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಬೆಳ್ಳಾರೆ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ವಿನಂತಿಸಿದೆ.

Leave a Reply

Your email address will not be published. Required fields are marked *

error: Content is protected !!