ಕ್ಯಾಂಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದಾರುಣ ಮೃತ್ಯು
ಕುಣಿಗಲ್: ಕ್ಯಾಂಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಭಾನುವಾರ ಸಂಭವಿಸಿದೆ.
ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45) ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು.
ಸೀಬೆಗೌಡ ತನ್ನ ಮಗನನ್ನು ಭಾನುಕಿರಣ್ ನನ್ನು ಕುಣಿಗಲ್ ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಈ ಘಟನೆಗೆ ಕ್ಯಾಂಟರ್ ನ ಚಾಲಕನ ಅಜಾಗರೂಕತೆ ಮತ್ತು ಸಾರಿಗೆ ನಿಯಮ ಉಲ್ಲಂಘನೆ ಕಾರಣ ಎನ್ನಲಾಗಿದೆ.





