September 21, 2026

ಬಂಟ್ವಾಳ: ರಹೀಂ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

0
IMG-20250630-WA0006.jpg

ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ನಿವಾಸಿ ಶಿವ ಪ್ರಸಾದ್ (33) ಬಂಧಿತ ಆರೋಪಿ.

 

ಶಿವ ಪ್ರಸಾದ್ ನನ್ನು ಬಂಟ್ವಾಳದ ರಾಯಿಯಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಲಯವು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27ರಂದು (ಮಂಗಳವಾರ) ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲುವಿನ ರಹೀಂ ಅವರನ್ನು ಹತ್ಯೆ ಮಾಡಿ ಅವರ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!