September 22, 2026

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ CAT

0
n6706897061751354475686931eea527bc5fe9cbeadbb298cbaad2c7977d6f39dfd1aa33ca8e18bfdd2a3c9.jpg

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದ ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಿದೆ. ತಮ್ಮನ್ನು ಅಮಾನತು ಮಾಡಿದ್ದ ಸರಕಾರದ ಆದೇಶ ರದ್ದು ಕೋರಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಕೆ.ಶ್ರೀವಾತ್ಸವ, ನ್ಯಾ.ಸಂತೋಷ್ ಮೆಹ್ರಾ ಅವರಿದ್ದ ಪೀಠ ಸರಕಾರದ ಆದೇಶ ರದ್ದುಗೊಳಿಸಲು ಆದೇಶ ಹೊರಡಿಸಿದೆ.

ಅಲ್ಲದೆ ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ಸಿಎಟಿ ಆದೇಶಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು. ಅಮಾನತು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶಿಸಿದೆ. ಆ ಮೂಲಕ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಗೆ ರಿಲೀಫ್ ಸಿಕ್ಕಿದೆ.

 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವು ಪ್ರಕರಣ ಸಂಬಂಧ ಅಮಾನತಾಗಿದ್ದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರು ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)ಗೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!