ಚಿಕ್ಕಮಗಳೂರು: ಇಂದಿನಿಂದ 1 ತಿಂಗಳು ಎತ್ತಿನಭುಜ ಚಾರಣ ಬಂದ್
ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಆದರೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭಾರೀ ಮಂಜು ಕವಿಯುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ.




