ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ. ವಂಚನೆ: 30 ವರ್ಷದ ನಂತರ ಆರೋಪಿಯ ಬಂಧನ
ಕಾರವಾರ: ಸರ್ಕಾರಿ ಕೆಲಸ ಕೊಡಿಸುವುದಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿಸಿದ್ದಾರೆ.
ಬೈಂದೂರಿ ಮೂಲದ ಪ್ರಸ್ತುತ ಬೆಂಗಳೂರಿನ ಬಳೆಪೇಠೆಯಲ್ಲಿ ನೆಲಸಿರುವ ಬಿ.ಕೆ.ರಾಮಚಂದ್ರರಾವ್ ಬಂಧಿತ ಆರೋಪಿಯಾಗಿದ್ದಾನೆ. ಈತನು 1990 ರಲ್ಲಿ ಶಿರಸಿಯಲ್ಲಿ ಬಿಳಿಗಿರಿ ಕೊಪ್ಪ ವೆಂಕಟೇಶ ವೈದ್ಯ ಎಂಬಾತನು ಪದವಿ ಓದುತ್ತಿರುವಾಗ ನೀಲಕಂಠ ಹೆಗಡೆ ಎಂಬವರ ಮೂಲಕ ಪರಿಚಯವಾಗಿತ್ತು. ವೆಂಕಟೇಶ್ ಎಂಬಾತನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ. ಗಳನ್ನು ಪಡೆದು ವಂಚಿಸಿ ಪರಾರಿಯಾಗಿದ್ದ.





