March 15, 2026

ಪಡುಬಿದ್ರಿ: ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯ

0
image_editor_output_image309067637-1751433464603.jpg

ಪಡುಬಿದ್ರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾದ ಬಳಿ ನಡೆದಿದೆ.

ಗಾಯಗೊಂಡವರನ್ನು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಎಂದು ಗುರುತಿಸಲಾಗಿದೆ.

ಮರ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯನ್ನು ಹೆಜಮಾಡಿ ಟೋಲ್ ಗೇಟಿನ ಕೆಲವೇ ಮೀಟರ್ ಗಳ ಅಂತರದಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದನ್ನು ಗಮನಿಸದ ಕಾರು ಚಾಲಕ ಹಿಂಬದಿಯಿಂದ ಗುದ್ದಿದ್ದಾನೆ. ಢಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ವಿರಾಜ್ ರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಟೋಲ್‌ ಸಿಬ್ಬಂದಿ ಸುಮಾರು ಒಂದು ಗಂಟೆ ಶ್ರಮಿಸಿದ್ದಾರೆ. ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!