ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ
ಹಾಸನ: ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸಂಜಯ್ (27) ಮೃತ ವ್ಯಕ್ತಿ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್ ಸೋಮವಾರ ಸಂಜೆ ಎದೆನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆಸ್ಪತ್ರೆಗೆ ಹೋಗಿದ್ದ.
ನಡೆಯಲೂ ಆಗದ ಸ್ಥಿತಿಯಲ್ಲಿ ಸಂಜಯ್‌ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದರು. ಕೂಡಲೇ ವೈದ್ಯರು ಆತನ ಬಿಪಿ ಪರೀಕ್ಷೆ ಮಾಡಿದ್ದರು. ಈ ವೇಳೆ 220ಕ್ಕೂ ಅಧಿಕ ಪ್ರಮಾಣದಲ್ಲಿ ಬಿಪಿ ಇದ್ದ ಬಗ್ಗೆ ಮಾಹಿತಿ ಲಭಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರೆಫರ್ ಮಾಡುವ ವೇಳೆಯೇ ಸಂಜಯ್ ಹಠಾ





