September 22, 2026

ಹೃದಯಾಘಾತದಿಂದ ಬಿಜೆಪಿ ಯುವ ಮೋರ್ಚಾದ ಮುಖಂಡ ಸಾವು

0
image_editor_output_image-1432307034-1751437747979.jpg

ತುಮಕೂರು: ರಾಜ್ಯದಲ್ಲಿ ದಿನೇದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ತುಮಕೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡರೊಬ್ಬರು ನಿಧನರಾಗಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಮುಖಂಡ ಹೆಬ್ಬಾಕ ನೀಲಕಂಠಸ್ವಾಮಿ (36) ನಿಧನ ಹೊಂದಿದವರು.

 

ಇವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳಿದ ತಕ್ಷಣ ಎದೆ ನೋವು ಕಾಣಿಸಿಕೊಂಡಿತ್ತು. ತುಮಕೂರಿನ ಕುವೆಂಪು ನಗರದಲ್ಲಿ ಹೃದಯಾಘಾತದಿಂದ ತಲೆ ಸುತ್ತು ಬಂದು ಬಿದ್ದಿದ್ದರು.

ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹೆಬ್ಬಾಕ ನೀಲಕಂಠಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಹೊಸ ಬಡಾವಣೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!