ಮಂಗಳೂರು: ಗಾಳಿ ಮಳೆಗೆ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ
ಮಂಗಳೂರು: ಭಾರೀ ಗಾಳಿ ಮಳೆಗೆ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರಿನ ನವಭಾರತ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಂಗಳೂರಿನ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ನಾನಾರೀತಿಯ ಆವಾಂತರಗಳು ಆಗಿವೆ. ಇದೀಗ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು, ಸಾಕಷ್ಟು ಹಾನಿಯಾಗಿದೆ.





