March 13, 2026

ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ನೀಡುವುದಾಗಿ ಪತ್ರ ವೈರಲ್: ಕೊನೆಗೂ ವ್ಯಕ್ತಿಯಿಂದ ದೂರು ದಾಖಲು

0
IMG-20211026-WA0010

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಷಯಕ್ಕೆ ಸಂಬಂಧಿಸಿದಂತೆ ಜು.3.ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.

ದೂರನ್ನು ಸ್ವೀಕರಿಸಲಾಗಿದ್ದು, ದೂರಿನ ಬಗ್ಗೆ ವಿಚಾರಣೆ ನಡೆಸಿ, ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!