ಬೈಕ್‌ಗೆ ಟ್ರ್ಯಾಕ್ಟರ್ ಢಿಕ್ಕಿ: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವು
ದಾವಣಗೆರೆ: ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್‌ನಲ್ಲಿ ನಡೆದಿದೆ.
ಎಸ್‌ಪಿ ಕಚೇರಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎ.ಗುರುಮೂರ್ತಿ(49) ಮೃತ ದುರ್ದೈವಿ.
ಗುರುಮೂರ್ತಿಯವರು ಎಸ್‌ಪಿ ಕಚೇರಿಯಲ್ಲಿ ಡ್ಯೂಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿಯಾಗಿದೆ.





