ಢಾಬಾದಲ್ಲಿ ಎಂಎಸ್ಸಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
ಲಕ್ನೋ: ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಢಾಬಾದಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ಅಲ್ಕಾ ಬಿಂದ್ (22) ಮೃತದೇಹ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾಲೇಜಿಗೆ ತೆರಳಿದ್ದ ನಾಪತ್ತೆಯಾದ ವರದಿಯಾದ ಕೆಲವೇ ಗಂಟೆಗಳ ಆಕೆಯ ಶವ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭದೋಹಿಯಲ್ಲಿರುವ ತನ್ನ ಸಹೋದರಿಯ ಮನೆಯಿಂದ ಆರೋಪಿ ಸಹಾಬ್ ಬಿಂದ್‌ನನ್ನು ಪೊಲೀಸರು ಬಂಧಿಸಿದ್ದಾರೆ.





