ಉಳ್ಳಾಲ: ನಾಪತ್ತೆಯಾಗಿದ್ದ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆ
ಉಳ್ಳಾಲ : ಜು. 2 ರಂದು ರಾತ್ರಿ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ.
ಕೋಟೆಕಾರು ಬೀರಿ ನಿವಾಸಿ, ಮೋಹನ್ ದಾಸ್ ಎಂಬವರ ಪುತ್ರ ತೇಜಸ್(25) ಮೃತ ಯುವಕ.
ಜು. 02 ರಂದು ರಾತ್ರಿ ಮಲಗುವ ಕೋಣೆಯಿಂದ ತೇಜಸ್ ನಾಪತ್ತೆಯಾಗಿದ್ದ.ಈ ಕುರಿತು ಆತನ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು(ಜು.04) ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.
ತೇಜಸ್ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದ್ದು ಘಟನೆಗೆ ಕಾರಣ ತಿಳಿದುಬಂದಿಲ್ಲ.
ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.





