March 13, 2026

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದ ಮೃತದೇಹಗಳನ್ನು ವಿಲೇವಾರಿ ಮಾಡಿದ ವಿಚಾರವಾಗಿ ದಾಖಲಾದ ದೂರು: ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಗೊಂಡ ಪೊಲೀಸ್ ಇಲಾಖೆ

0
IMG-20211026-WA0010

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಹಲವಾರು ಅಪರಾಧ ಪ್ರಕರಣಗಳ ಮಾಹಿತಿ ನೀಡುವುದಾಗಿ ಪೊಲೀಸ್ ಠಾಣೆಗೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ.

ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ದವಿರುವುದಾಗಿ, ದಿನಾಂಕ 03.07.2026 ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.

ಈ ದೂರಿನ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು, ಈ ದಿನ ದಿನಾಂಕ 04.07.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್‌ ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದು, ಸದ್ರಿ ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ಜಿಲ್ಲಾ ಎಸ್ಪಿ ಅವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!