September 22, 2026

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

0
IMG-20250704-WA0017.jpg

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಅಬ್ದುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ ಕತಾರ್ ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ ಕತಾರ್ ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಪರಾರಿಯಾಗಿದ್ದ. ಹೀಗಾಗಿ, ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿದೆ.

2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!