September 22, 2026

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ ಮುಂಬೈ ಮೂಲದ ಮುಖ್ಯ ಆರೋಪಿಗಳ ಬಂಧನ

0
image_editor_output_image1642342286-1751794705245.jpg

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಹೇಳಿ ನಂಬಿಸಿ ಮಂಗಳೂರು ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪಿತರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ.

ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಬೆಂದೂರ್ ವೆಲ್ ໖໐໙ Hireglow Elegant Overseas International (Ope) Private Limited 2 ತೆರೆದು, ಪತ್ರಿಕೆಯಲ್ಲಿ ಜಾಹೀರಾತನ್ನು ನೀಡಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 289 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ಮೊ. ನಂ-75/2025 600: 316(2),318(4),r/w 3(5)) BNS 03 ม.

 

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಸೀವುಲ್ಲಾ ಖಾನ್ ಎಂಬ ಮುಂಬೈ ಮೂಲದ ಆರೋಪಿಯನ್ನು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ. ತನಿಖೆಯನ್ನು ಮುಂದುವರೆಸಿ ಪ್ರಕರಣದ ಪ್ರಮುಖ ಆರೋಪಿಗಳಾದ

1. ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ತಂದೆ: ಅಬ್ದುಲ್ ಸತ್ತಾರ್ ವಾಸ: ಪ್ಲಾಟ್ ನಂ-103, 1ನೇ ಪ್ಲೋರ್, ‘ಸಿ’ ವಿಂಗ್, ರಾಮಚಂದ್ರ ನಿವಾಸ, ಕೋಪರಕ್ಕೆರಾನೆ. ನವಿ ಮುಂಬೈ,ಮಹಾರಾಷ್ಟ್ರ,

2. ಸಾಹುಕಾರಿ ಕಿಶೋರ್ ಕುಮಾರ್ @ ಅನಿಲ್ ಪಾಟೀಲ್ (34) ತಂದೆ: ಚಂದ್ರಸೇನ ವಾಸ; ಪ್ಲಾಟ್ ನಂ-504, 5ನೇ ಪ್ಲೋರ್, ‘ಜೆ’ ವಿಂಗ್ ಎಸ್ಪಿಲಾ ಅಪಾರ್ಟಮೆಂಟ್, ಪಲಾವ್ ಸಿಟಿ, ದೊಂಬಿವೆಲ್, ಥಾಣೆ, ಮಹಾರಾಷ್ಟ್ರ, ಎಂಬವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣದ ಹೆಚ್ಚಿನ ತನಿಖೆಯ ಬಗ್ಗೆ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿರುತ್ತಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!