ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ: 8 ಮಂದಿ ಆರೋಪಿಗಳ ಬಂಧನ
ಬೆಂಗಳೂರು: ಗ್ಯಾಂಗ್ ವೊಂದು ಯುವಕನೋರ್ವನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನಿಗೆ ಥಳಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.




