February 1, 2026

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ವಿಧಾನಸಭೆಯಲ್ಲಿ ಅಂಗೀಕಾರ

0
n34404559816402657262480a6f165121a27c1a2eb7393ffdd4f1a88987e08223258015699a3574c011e7b2.jpg

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಮಂಗಳವಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು. ಬಳಿಕ ಒಂದಿಡೀ ದಿನ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

ಇನ್ನು ಕಾಂಗ್ರೆಸ್ ಸದಸ್ಯರ ಭಾರಿ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

Leave a Reply

Your email address will not be published. Required fields are marked *

error: Content is protected !!