March 13, 2026

ಬಂಟ್ವಾಳ: ಸುಜೀರಿನ ಯುವತಿಗೆ ಹಲ್ಲೆ ನಡೆಸಿ ಬಳಿಕ, ಆಕೆಯ ಮನೆಯಲ್ಲಿ ನೇಣು ಬಿಗಿದ ಯುವಕ

0
image_editor_output_image1767293240-1751887525836.jpg

ಬಂಟ್ವಾಳ: ತಾಲೂಕಿನ ಕೊದ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊದ್ಮಾಣ್ ನಿವಾಸಿ ಸುಧೀ‌ರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆಯಲ್ಲಿ ಗಾಯಗೊಂಡ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!