ಕಾರಿಗೆ ಟ್ರಕ್ ಢಿಕ್ಕಿ: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರು ಸಜೀವ ದಹನ
ವಾಷಿಂಗ್ಟನ್: ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವವಾಗಿ ದಹನವಾಗಿರುವ ದಾರುಣ ಘಟನೆ ಅಮೆರಿಕದ ಡಲ್ಲಾಸ್ ನಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.
ಹೈದರಾಬಾದ್ ಮೂಲದ ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಅಮೆರಿಕದಲ್ಲಿ ವಿಹಾರಕ್ಕೆ ಹೋಗಿದ್ದು, ಅಟ್ಲಾಂಟದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಭೇಟಿ ನೀಡಿ ಡಲ್ಲಾಸ್ ಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ದಾರುಣ ಘಟನೆ ನಡೆದಿದೆ.
ಗ್ರೀನ್ ಕೌಂಟಿಯಲ್ಲಿ ಈ ಅಪಘಾತ ಸಂಭವಿಸಿತ್ತು. ರಸ್ತೆ ರಾಂಗ್ ಸೈಡ್ ನಿಂದ ವೇಗವಾಗಿ ಆಗಮಿಸಿದ್ದ ಮಿನಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ನಾಲ್ವರು ಜೀವಂತವಾಗಿ ಸುಟ್ಟು ಹೋಗಿರುವುದಾಗಿ ವರದಿ ವಿವರಿಸಿದೆ.





