March 15, 2026

ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲು ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

0
image_editor_output_image1487775782-1751955169138.jpg

ಚೆನ್ನೈ: ಮಂಗಳವಾರ ಬೆಳ್ಳಂಬೆಳ್ಳಗೆ ತಮಿಳುನಾಡಿನ ಕಡಲೂರು ಬಳಿಯ ಸೆಮ್ಮಂಕುಪ್ಪಂನಲ್ಲಿ ಘೋರ ದುರಂತವೊಂದು ಸಂಭವಿಸಿದೆ, ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಚಾಲಕ ಸೇರಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಮಂಗಳವಾರ ಬೆಳಿಗ್ಗೆ 7:45ರ ಸುಮಾರಿಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸು ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತ್ತಿದ್ದ ಸಂದರ್ಭ ಪ್ಯಾಸೆಂಜ‌ರ್ ರೈಲು ಢಿಕ್ಕಿ ಹೊಡೆದಿದೆ ಪರಿಣಾಮ ಬಸ್ಸು ಕೆಲ ದೂರ ಎಸೆಯಲ್ಪಟ್ಟಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಕಡಲೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!