March 13, 2026

ಮಹಿಳೆಗೆ ಮೇಲೆ ಲೈಂಗಿಕ ದೌರ್ಜನ್ಯ: RCB ಆಟಗಾರ ಯಶ್ ದಯಾಳ್ ವಿರುದ್ಧ ಎಫ್‌ಐಆರ್ ದಾಖಲು

0
image_editor_output_image554109924-1751965028183.jpg

ಗಾಜಿಯಾಬಾದ್‌: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಇಂದು (ಮಂಗಳವಾರ) ತಿಳಿಸಿದ್ದಾರೆ.

27 ವರ್ಷದ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಐಜಿಆರ್‌ಎಸ್‌ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ್ದರು. ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!