ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಫೋಟೋ: ರತನ್ ರಂಜನ್ ವಿರುದ್ಧ ಎಫ್‌ಐಆರ್ ದಾಖಲು
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮಾರ್ಫ್ ಮಾಡಿದ ಫೋಟೋವನ್ನು ಸ್ಯಾನಿಟರಿ ಪ್ಯಾಡ್‌ನಲ್ಲಿ ಹಾಕಿ ವಿಡಿಯೋ ಪ್ರಸಾರ ಮಾಡಿದ ಹಾಸ್ಯನಟ ರತನ್ ರಂಜನ್ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದು, ರಂಜನ್ ಮತ್ತು ಇತರರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ರಾಹುಲ್ ಗಾಂಧಿಯವರ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುತ್ತಿದ್ದಾರೆ. ಈ ಈ ಮೂಲಕ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.





