ಪುತ್ತೂರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಪುತ್ತೂರು: ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತೆಯ ಜತೆ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಬಗ್ಗೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯು ತನ್ನ ತಾಯಿಯೊಂದಿಗೆ ಜು 8ರಂದು, ಪುತ್ತೂರು ನಗರದ ಹೊರ ವಲಯ ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ ಎಂದು ಸಂತ್ರಸ್ಥೆಯ ತಾಯಿ ದೂರು ನೀಡಿದ್ದಾರೆ.
ಈ ಬಗ್ಗೆ ಭಾರತೀಯ ನ್ಯಾಯ ಸಂಹಿತೆಯ ಕಲಂ: 126(2), 74, 115(2), 353(2) BNS 2023, 8 POCSO 2012 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಸಿದ್ದಾರೆ
ಸಂತ್ರಸ್ಥ ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕೆಂದು ದಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ| ಅರುಣ್ ಮಾದ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





