77 ಲಕ್ಷ ವಂಚನೆ ಪ್ರಕರಣ: ವೇದಿಕಾ ಪ್ರಕಾಶ್ ಶೆಟ್ಟಿ ಬಂಧನ
ಬೆಂಗಳೂರು: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ಭಟ್ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ
ಆಲಿಯಾ ಭಟ್ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.




