ಗುಜರಾತ್‌ನಲ್ಲಿ ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ವಡೋದರಾ: ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್‌ನ ವಡೋದರಾದಲ್ಲಿ ಬುಧವಾರ ನಡೆದಿದೆ.
ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ. ಇದರ ಪರಿಣಾಮ ವಾಹನಗಳು ನೀರಿಗೆ ಬಿದ್ದು ಹಲವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಋಷಿಕೇಶ ಪಟೇಲ್ ತಿಳಿಸಿದ್ದಾರೆ. ‘ಈ ಸೇತುವೆಯು 1985ರಲ್ಲಿ ನಿರ್ಮಾಣಗೊಂಡಿತ್ತು. ಇದರ ನಿರ್ವಹಣೆಯೂ ಆಯಾ ಕಾಲಕ್ಕೆ ನಡೆದಿದೆ. ದುರಂತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುವುದು’ ಎಂದು ಅವರು ಹೇಳಿದ್ದಾರೆ.
ತಾಂತ್ರಿಕ ಪರಿಣಿತ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ತನಿಖೆ ನಡೆಸಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆದೇಶಿಸಿದ್ದಾರೆ.




