March 13, 2026

ಸಿದ್ದಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿರುವ ಪುತ್ತೂರಿನ ಹೊಸ ನ್ಯಾಯಾಲಯ ಕಟ್ಟಡ

0
image_editor_output_image1917218149-1752052384921.jpg

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ದಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ ಶಿಫ್ಟ್ ಆಗಲಿದೆ.

2022 ರಲ್ಲಿ ಈ ಹೊಸ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಇದೀಗ ಕಟ್ಟಡದ ಬಹುತೇಕ ಕಾಮಗಾರಿಗಳು ಮುಕ್ತಾಯವಾಗಿದೆ. ಅಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಮೂಲಕ ಸುಮಾರು 50 ಕೋಟಿ ವೆಚ್ಚದ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ವೆಚ್ಚದ ವಕೀಲರ ಸಂಘದ ಕಟ್ಟಡ ಇಲ್ಲಿ ನಿರ್ಮಾಣಗೊಂಡಿದೆ.

ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ರೂಪಾಯಿ ವೆಚ್ಚದಲ್ಲಿ ವಕೀಲರ ಸಂಘದ ಕಟ್ಟಡವನ್ನು ನಿರ್ಮಿಸುವ ಯೋಜನೆಯಿತ್ತು.

ಆ ಬಳಿಕ ಅಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್‌ ಇದೇ ನ್ಯಾಯಾಲಯ ಸಂಕೀರ್ಣ ಜಿಲ್ಲಾ ನ್ಯಾಯಾಲಯದ ಸ್ಥಾಪನೆಗೂ ಅವಕಾಶವಿರಬೇಕು ಎನ್ನುವ ಕಾರಣಕ್ಕೆ ಇದೇ ಕಟ್ಟಡಕ್ಕೆ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ವಿನಿಯೋಗಿಸಿ ಒಟ್ಟು 55 ಕೋಟಿ ರೂಪಾಯಿ ವ್ಯಯಿಸಿ ಈ ಕಟ್ಟಡದ ನಿರ್ಮಾಣವಾಗಿದೆ.

ನ್ಯಾಯಾಲಯಕ್ಕೆ ಸಂಪರ್ಕ ಕಲ್ಪಿಸು ವ ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

error: Content is protected !!