ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಸಾವು
ಚಾಮರಾಜನಗರ: ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.9ರ ಬುಧವಾರ ಬೆಳಗ್ಗೆ ನಡೆದಿದೆ.
ಮನೋಜ್ ಕುಮಾರ್(10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು, ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತಿದ್ದರು ಎನ್ನಲಾಗಿದೆ.




