March 13, 2026

ಕಾಲೇಜು ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

0
image_editor_output_image895638536-1752053341731.jpg

ದಾವಣಗೆರೆ: ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ದಾವಣಗೆರೆಯ ಜಯನಗರದಲ್ಲಿ ನಡೆದಿದೆ.

ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಮೃತಪಟ್ಟಿದ್ದಾನೆ. ಅಕ್ಷಯ್ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ.

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸಿದ ಕೆಲ ಕ್ಷಣಗಳಲ್ಲಿ ಅಕ್ಷಯ್ ಮೃತಪಟ್ಟಿದ್ದಾನೆ.

ಕಳೆದು ಮೂರು ತಿಂಗಳಲ್ಲಿ ಕೇವಲ ದಾವಣಗೆರೆ ಜಿಲ್ಲಾ ಆಸ್ಪತ್ರೆ ಒಂದರಲ್ಲಿಯೇ 75 ಕ್ಕೂ ಹೆಚ್ಚು ಜನ ಹೃದಯಾಘಾತದಿಂದ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!