ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತ್ಯು
ಧಾರವಾಡ: ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ಮಂಗಳವಾರ ನಡೆದಿದೆ.
ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟವರು. ನಿನ್ನೆ ಬೆಳಗ್ಗೆ ಮನೆಯಲ್ಲಿ ತಲೆ ಸುತ್ತು ಬರುತ್ತಿದೆ ಎಂದು ಯುವತಿ ಸುಸ್ತಾಗಿ ಕುಳಿತಿದ್ದರು.
ನಂತರ ಕುಟುಂಬದವರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ.




