March 13, 2026

ಮಂಗಳೂರು ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ: ಮೂವರು ಆರೋಪಿಗಳ ಬಂಧನ

0
image_editor_output_image1326641515-1752059035357.jpg

ಮಂಗಳೂರು ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಜಾಲದ ಉತ್ತರ ಭಾರತ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸೆನ್ ಕ್ರೈಂ ಪೊಲೀಸರು ಬಂಧಿಸಿ ಅವರಿಂದ 3 ಮೊಬೈಲ್ ಫೋನ್ ಮತ್ತು 1,78,920 ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮಧ್ಯ ಪ್ರದೇಶದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಚೋಪ್ಲಾನಿವಾಸಿಗಳಾದ ಪ್ರೇಮಸಿಂಗ್ ರಾಮ ಪವಾರ ( 48) ಮತ್ತು ಅನಿಲ್ ಪ್ರಕಾಶ್ ಕೋಲಿ ( 35) ಬಂಧಿತ ಆರೋಪಿಗಳು.

ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದ 6 ಜನರನ್ನು ಪತ್ತೆ ಮಾಡಿ ಜುಲೈ 2 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!