ಉಪ್ಪಿನಂಗಡಿ: ಅಪಘಾತದಲ್ಲಿ ಗಾಯಗೊಂಡಿದ್ದ ನೌಷದ್ ಬೊಳ್ಳಾರ್ ಮೃತ್ಯು
ಉಪ್ಪಿನಂಗಡಿ: ಕಳೆದ ಜೂ. 7ರಂದು 34ನೇ ನೆಕ್ಕಿಲಾಡಿಯ ಬೊಳ್ಳಾರ್ ಎಂಬಲ್ಲಿ ರಾ. ಹೆ. 75ರಲ್ಲಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ನೌಷದ್ ಬೊಳ್ಳಾರ್ (34) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟ ಘಟನೆ ವರದಿಯಾಗಿದೆ.
ಬಕ್ರಿದ್ ಹಬ್ಬದ ದಿನ ಅಗರಬತ್ತಿ ಖರೀದಿಸಲೆಂದು ಬೈಕ್‌ನಲ್ಲಿ ಅಂಗಡಿಗೆ ಹೋಗಿ ಹಿಂದಿರುಗುವ ಸಂದರ್ಭ ಇನ್ನೊಂದು ಬೈಕ್ ಢಿಕ್ಕಿ ಹೊಡೆದು ನೌಷದ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆದಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟರು.
ಮೃತರು ಪತ್ನಿ, ನವಜಾತಶಿಶು ಸಹಿತ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ




