June 21, 2026

ಮನೆಯಲ್ಲಿ ಪ್ರೀತಿಗೆ ನಿರಾಕರಣೆ; ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ ಯುವತಿ ಸಾವು

0
image_editor_output_image-1261347435-1752128883442.jpg

ಗದಗ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತೆ ಸಾವನ್ನಪ್ಪಿರುವ ಘಟನೆ ಗದಗ (Gadag) ಜಿಲ್ಲೆ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ.

17 ವರ್ಷದ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಯುವಕ ದೇವಪ್ಪ ಅಲಿಯಾಸ್ ಮುತ್ತು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಅಪ್ರಾಪ್ತೆಯ ಮನೆಯಲ್ಲಿ ಇಬ್ಬರ ಪ್ರೀತಿಯನ್ನು ನಿರಾಕರಿಸಿದ್ದರು. ಇದ್ದರಿಂದ ಮನನೊಂದ ಪ್ರೇಮಿಗಳಿಬ್ಬರು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ಇಬ್ಬರನ್ನು ಗ್ರಾಮಸ್ಥರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!