July 5, 2026

ಧರ್ಮಸ್ಥಳ: ನೂರಾರು ಮೃತದೇಹಗಳ ಹೂತಿಟ್ಟ ಹೇಳಿಕೆ ನೀಡಿದ ವ್ಯಕ್ತಿ ನ್ಯಾಯಾಲಯದಿಂದ ಬೆಳ್ತಂಗಡಿ ಠಾಣೆಗೆ

0
WhatsApp-Image-2025-07-11-at-7.23.19-PM-750x375.jpeg

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನಿಡಿದ್ದು, ನ್ಯಾಯಾಧೀಶರು ಸದ್ರಿ ವ್ಯಕ್ತಿ ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಸುಮಾರು 1 ಗಂಟೆ 20 ನಿಮಿಷ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಹೇಳಿಕೆ ನೀಡಲು ಬಂದ ವ್ಯಕ್ತಿಯನ್ನು ನ್ಯಾಯಾಲಯದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

ನ್ಯಾಯಾಲಯ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗೆ ಪೊಲೀಸರಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ. ಆ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಎಫ್‌ಎಸ್‌ಎಲ್‌ ಅಧಿಕಾರಿಗಳ ತಂಡ ಆಗಮಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!