ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ: 12 ಮಂದಿ ಆರೋಪಿಗಳ ಬಂಧನ
ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಪ್ರಕರಣದ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್‌ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಎಂಬ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಬಂಧಿತರೆಲ್ಲರು ಹುಬ್ಬಳ್ಳಿ ಮೂಲದವರಾಗಿದ್ದು, ಇಲ್ಲಿವರೆಗೆ ಬಂಧಿತರಿಂದ ಒಟ್ಟು 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಒಂದು ಲಾರಿ, 5 ಕಾರು ಸೇರಿದಂತೆ 39.26 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.





