ಉಡುಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ: ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ
ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತರ ರಾಜ್ಯ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿರುತ್ತಾರೆ.
ಜೂನ್ 22 ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಬಳಿ ಗಣೇಶ್ ಪ್ರಸಾದ್ ಶೆಟ್ಟಿ ರವರ ಮನೆಯ ಬಾಗಿಲನ್ನು ಯಾರೋ ಕಳ್ಳರು ಒಡೆದು ಮನೆಯ ಒಳಗೆ ನುಗ್ಗಿ 1,20,00 ರೂ. ಮತ್ತು 25,000ರೂ. ಮೌಲ್ಯದ ಒಂದು ಹಳೆ ಚಿನ್ನದ ಸರವನ್ನು ಕಳ್ಳತನ ಮಾಡಿ ಹೋಗಿದ್ದು ಈ ಬಗ್ಗೆ ಗಣೇಶ್ ಪ್ರಸಾದ್ ಶೆಟ್ಟಿ ಅವರು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ದಾಖಲಾಗಿರುತ್ತದೆ.
ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಹರಿರಾಮ್ ಶಂಕರ ಐಪಿಎಸ್ ರವರ ಆದೇಶದಂತೆ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸದಾನಂದ ಎಸ್ ನಾಯಕ್ ಮತ್ತು ಪರಮೇಶ್ವರ ಹೆಗಡೆರವರ ಮಾರ್ಗದರ್ಶನದಂತೆ ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಾಂವಧ ಐಪಿಎಸ್ ರವರ ನೇತೃತ್ವದಲ್ಲಿ, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಮಾನೆ, ಪಡುಬಿದ್ರಿ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಸಕ್ತಿವೇಲು ಮತ್ತು ಅನಿಲ್ ಕುಮಾರ್ ಮತ್ತು ಸಿಬ್ಬಂದಿಗಳಾದ ಎಎಸ್‌ಐ ರಾಜೇಶ್ ಪಿ, ಗಿರೀಶ್, ಹೆಡ್ ಕಾನ್ಸೆಬಲ್ ಕೃಷ್ಣ ಪ್ರಸಾದ್, ಸಂದೇಶ್ ಕುಮಾರ್, ಕಾಪು ವೃತ್ತ ಕಚೇರಿಯ ಸಿಬ್ಬಂದಿ ಜೀವನ್ ಕುಮಾರ್, ಕಾಪು ಪೊಲೀಸ್ ಠಾಣಾ ಸಿಬ್ಬಂದಿ ಮೋಹನ್ ಚಂದ್ರ, ರಘು, ಅಜೆಕಾರು ಪೋಲಿಸ್ ಠಾಣಾ ಸಿಬ್ಬಂದಿಗಳಾದ ಹೆಡ್‌ಕಾನ್ಸ್‌ಟೇಬಲ್ ಸತೀಶ್ ಮತ್ತು ಪ್ರದೀಪ್ ಶೆಟ್ಟಿ ಅವರು ಕಳ್ಳತನದ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ.




