March 13, 2026

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ-ಒಟ್ಟು ಬಂಧಿತರ ಸಂಖ್ಯೆ 10ಕ್ಕೇರಿಕೆ

0
image_editor_output_image-284603118-1752336641276

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27 ರಂದು ಅಪರಾಹ್ನ ವೇಳೆ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಮತ್ತೋರ್ವ ಆರೋಪಿ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಎಂಬಾತನನ್ನು ಶನಿವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದ್ದು, ಮಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಒಟ್ಟು ಸಂಖ್ಯೆ 10ಕ್ಕೇರಿದಂತಾಗಿದೆ.

ಈಗಾಗಲೇ ಪ್ರಕರಣದಲ್ಲಿ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ನಿವಾಸಿ ರವಿರಾಜ್ (23), ತೆಂಕಬೆಳ್ಳೂರು ಗ್ರಾಮದ ನಿವಾಸಿ ಅಭಿನ್ ರೈ (32), ಬಡಗಬೆಳ್ಳೂರು ಗ್ರಾಮದ ನಿವಾಸಿ ತೇಜಾಕ್ಷ (24), ಶೃಂಗೇರಿ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಹಾಗೂ ತುಂಬೆ ನಿವಾಸಿ ಶಿವಪ್ರಸಾದ್ (33) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!