March 13, 2026

ವಿಟ್ಲ: ಅತ್ಯಾಚಾರ ಪ್ರಕರಣದಲ್ಲಿ 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಬಿಹಾರ ರಾಜ್ಯದಲ್ಲಿ ಬಂಧಿಸಿದ ವಿಟ್ಲ ಪೊಲೀಸರು

0
image_editor_output_image136696466-1752423583856

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರ ರಾಜ್ಯದಲ್ಲಿ ಬಂಧಿಸಿದ್ದಾರೆ.

2015 ರಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸ್ ಠಾಣಾ ಅಕ್ರ 218/2015 ಕಲಂ: 448,341,323, 376(G),506,34 ಭಾದಂಸಂ ರಂತೆ ಪ್ರಕರಣ ದಾಖಲಾಗಿತ್ತು.

ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ‌ ಸ್ಥಳಿಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!