ಪುತ್ತೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಸಾರ್ವಜನಿಕರ ಸಹಾಯದಿಂದ ಆರೋಪಿಯ ಬಂಧನ
ಪುತ್ತೂರು: ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವನು ಕೈಯಲ್ಲಿ ತಲವಾರ ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಘಟನೆ ಜುಲೈ 14 ರಂದು ಮಧ್ಯಾಹ್ನ ನಡೆದಿದೆ.
ಈ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಹಾಸನ ಮೂಲದ ರಾಜು (45) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿದ್ದನೆಂಬ ಮಾಹಿತಿ ಲಭಿಸಿದೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025ರಂತೆ, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ 25(1B)(b) ಸೆಕ್ಷನ್ ಹಾಗೂ 110 BNS ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.




